ಅಥಣಿ: ರಾಜೀನಾಮೆ ನೀಡಲು ಡಿಕೆಶಿ ಕಾರಣರು. ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲಿ ಎಂಬ ಉದ್ದೇಶದಿಂದ ರಾಜೀನಾಮೆ ನೀಡಲಿಲ್ಲ ಎಂದು ಅನರ್ಹ ಶಾಸಕ ರಮೇಶ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಪಟ್ಟಣದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಮ್ಮಿಶ್ರ ಸರ್ಕಾರ ಒಂದು ವರ್ಷದ ಅವಧಿಯಲ್ಲಿ ನಮ್ಮ ಕ್ಷೇತ್ರಕ್ಕೆ ಯಾವುದೇ ರೀತಿಯ ಅನುದಾನವನ್ನೂ ನೀಡಲಿಲ್ಲ. ಮುಂದೆಯೂ ಹೀಗೆಯೇ ಆಗಬಹುದು ಎಂದೆಣಿಸಿ ರಾಜೀನಾಮೆ ನೀಡಿದೆವು. ನ್ಯಾಯಾಲಯದ ತೀರ್ಪು ಬಂದ ನಂತರವೇ ಯಾವ ಪಕ್ಷಕ್ಕೆ ಹೋಗಬೇಕು ಎನ್ನುವುದನ್ನು ತೀರ್ಮಾನಿಸಲಾಗುತ್ತದೆ’ ಎಂದು ಹೇಳಿದರು.
‘ಸಹೋದರ ಶಾಸಕ ಸತೀಶ ಅವರ ತಲೆ ಸರಿಯಿಲ್ಲ. ಅವರನ್ನು ಧಾರವಾಡದ ಹುಚ್ಚಾಸ್ಪತ್ರೆಗೆ ಸೇರಿಸಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಒಳ್ಳೆಯ ರಾಜಕಾರಣಿ. ಅವರು ಕೊಟ್ಟ ಮಾತನ್ನು ಈಡೇರಿಸುತ್ತಾರೆ’ ಎಂದ ಅವರು, ಯಾವ ಮಾತು ಕೊಟ್ಟಿದ್ದಾರೆ ಎನ್ನುವುದನ್ನು ಅವರು ಬಹಿರಂಗಪಡಿಸಲಿಲ್ಲ. ಅನರ್ಹ ಶಾಸಕ ಮಹೇಶ ಕುಮಠಳ್ಳಿ ಅವರೂ ಈ ಸಂದರ್ಭದಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.