ತುಮಕೂರು: ದೆಹಲಿಯಲ್ಲಿ ಈಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡು ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭಾನುವಾರ ನಗರದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಪರಮೇಶ್ವರ ಭೇಟಿಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಸತೀಶ ಜಾರಕಿಹೊಳಿ, ‘ಬೇರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಬಂದಿದ್ದೆ. ಹಾಗೆಯೇ ಪರಮೇಶ್ವರ ಅವರನ್ನು ಭೇಟಿ ಮಾಡಿದೆ. ಇಬ್ಬರೂ ಕುಳಿತು ಊಟ ಮಾಡಿದೆವು’ ಎಂದರು.
ಭೇಟಿ ವೇಳೆ ರಾಜಕೀಯ ಚರ್ಚೆ ಆಗಿಲ್ಲ. ರಾಜ್ಯದಲ್ಲಿ ದಲಿತ ಸಿ.ಎಂ ಪ್ರಸ್ತಾವನೆ ಸದ್ಯಕ್ಕಿಲ್ಲ. ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಸಿ.ಎಂ ಬದಲಾವಣೆಯ ಸನ್ನಿವೇಶ ಬರುವುದಿಲ್ಲ ಎಂದರು.
‘ನಾವು ಎಲ್ಲರೂ ಸಿದ್ದರಾಮಯ್ಯ ಜತೆ ನಿಂತಿದ್ದೇವೆ. ಸರ್ಕಾರವನ್ನು ಅಸ್ಥಿರ ಮಾಡಲು ಬಿಡುವುದಿಲ್ಲ. ಸತೀಶ ಭೇಟಿ ಮಾಡಿ ಊಟ ಮಾಡಿಕೊಂಡು ಹೋಗಿದ್ದಾರೆ. ಬೇರೆ ಯಾವುದೇ ಚರ್ಚೆಯಾಗಿಲ್ಲ’ ಎಂದು ಪರಮೇಶ್ವರ ಕೂಡ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.