ADVERTISEMENT

ಜಮೀರ್ ಇಂಗ್ಲಿಷ್‌ನಲ್ಲಿ ಪ್ರಮಾಣವಚನ: ಕನ್ನಡ ಕಲಿಯದಿರುವುದು ಎಷ್ಟು ಸರಿ ಎಂದ ಹೋರಾಟಗಾರರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಮೇ 2023, 9:43 IST
Last Updated 20 ಮೇ 2023, 9:43 IST
ಜಮೀರ್ ಅಹ್ಮದ್ ಖಾನ್
ಜಮೀರ್ ಅಹ್ಮದ್ ಖಾನ್   

ಬೆಂಗಳೂರು: ರಾಜ್ಯದ ನೂತನ ಸಚಿವರಾಗಿ ಜಮೀರ್ ಅಹ್ಮದ್ ಇಂಗ್ಲಿಷ್‌ನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ಕನ್ನಡ ಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ.

ಜಮೀರ್ ನಡೆ ಖಂಡಿಸಿ ಟ್ವೀಟ್ ಮಾಡಿರುವ ಕನ್ನಡ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಟಿ.ಎ. ನಾರಾಯಣಗೌಡ, ‘ಕರ್ನಾಟಕ ಸರ್ಕಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಜಮೀರ್ ಅಹ್ಮದ್ ಖಾನ್ ಅವರು ಇನ್ನೂ ಕನ್ನಡ ಕಲಿಯದಿರುವುದು ನಾಚಿಕೆಗೇಡು.ಎಲ್ಲ ಸಚಿವರೂ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಜಮೀರ್ ಅಹಮದ್ ಅವರು ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಕಾರಣಕ್ಕೆ ಬಂದು ಇಷ್ಟು ವರ್ಷಗಳಾದರೂ ಕನ್ನಡ ಕಲಿಯದಿರುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕಕ್ಕೆ ಬರುವ ರಾಷ್ಟ್ರೀಯ ನಾಯಕರೇ ಕನ್ನಡದಲ್ಲಿ ಮಾತನಾಡಲು ಪ್ರಯತ್ನ ಮಾಡುತ್ತಿರುವಾಗ ಈ ನಾಡಿನಲ್ಲೇ ಹುಟ್ಟಿರೋ ಜಮೀರ್ ಅಹ್ಮದ್ ಅವರೇ, ಇಷ್ಟು ವರ್ಷದಿಂದ ಇಲ್ಲೇ ಇದ್ದು ಕರ್ನಾಟಕದಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವುದಿಲ್ಲ. ಅಂದರೆ ನಿಮಗೇನು ಹೇಳೋದು. ಮೊದಲು ಕನ್ನಡ ಮಿಕ್ಕಿದ್ದು ಆಮೇಲೆ. ನಿಮ್ಮ ಈ ನಡೆಗೆ ನಮ್ಮ ವಿರೋಧ ಇದೆ’ ಎಂದು ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಟ್ವೀಟ್ ಮಾಡಿದ್ದಾರೆ.

ADVERTISEMENT

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಂತ್ರಿ ಮಂಡಲದಲ್ಲಿ ನಾಲಾಯಕ್ ಮಂತ್ರಿ ನಂಬರ್ 1: ಜಮೀರ್ ಅಹ್ಮದ್ ಖಾನ್. ಸಜ್ಜನರಾದ ಸಲೀಂ ಅಹ್ಮದ್‌ ಹಾಗೂ ರಿಜ್ವಾನ್ ಅರ್ಷದ್ ಇದ್ದರೂ ವಿಷಯಗಳ ವ್ಯತ್ಯಾಸ ತಿಳಿಯದೇ, ಕನ್ನಡ ಬಾರದ ದಪ್ಪ ನಾಲಿಗೆಯಿಂದ ಎಗ್ಗಿಲ್ಲದೇ ಮಾತನಾಡುವ ಈತನಿಗೆ ಸಂಪುಟ ದರ್ಜೆ ಮಂತ್ರಿ ಪದವಿ ಕೊಟ್ಟಿರುವುದು ಒಂದು ದೊಡ್ಡ ಕಪ್ಪು ಚುಕ್ಕೆ ಎಂದು ಪ್ರಹ್ಲಾದ್ ಹನುಮಂತಯ್ಯ ಎಂಬುವರು ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.