ADVERTISEMENT

ಕೆಎಎಸ್‌: ಪೂರ್ವಭಾವಿ ಪರೀಕ್ಷೆ ಆ. 25ಕ್ಕೆ ಮರುನಿಗದಿ

​ಪ್ರಜಾವಾಣಿ ವಾರ್ತೆ
Published 27 ಜೂನ್ 2024, 16:38 IST
Last Updated 27 ಜೂನ್ 2024, 16:38 IST
ಕೆಪಿಎಸ್‌ಸಿ
ಕೆಪಿಎಸ್‌ಸಿ    

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಗ್ರೂಪ್‌ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳಿಗೆ ಜುಲೈ 21ರಂದು ನಡೆಸಲು ಉದ್ದೇಶಿಸಿದ್ದ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್‌ 25ಕ್ಕೆ ಮುಂದೂಡಲು ಕೆಪಿಎಸ್‌ಸಿ ನಿರ್ಧರಿಸಿದೆ.

ಈ ಕುರಿತು ಪ್ರಕಟಣೆ ನೀಡಿರುವ ಕೆಪಿಎಸ್‌ಸಿ, ‘2017–18ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಜೂನ್‌ 21ರಂದು ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಈ ಅಭ್ಯರ್ಥಿಗಳು 2023-24ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಹೀಗಾಗಿ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ತೀರ್ಮಾನಿಸಲಾಗಿದೆ’ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಕೆ. ರಾಕೇಶ್‌ ಕುಮಾರ್‌ ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.