ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ–3ರ ಫಲಿತಾಂಶ ಮಂಗಳವಾರ (ಜುಲೈ 16)ರಂದು ಮಧ್ಯಾಹ್ನ 3ಕ್ಕೆ ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಮಂಡಳಿ, ‘ಜೂನ್ 24ರಿಂದ ಜುಲೈ 5ರ ವರೆಗೆ ಪರೀಕ್ಷೆ ನಡೆದಿತ್ತು. ಫಲಿತಾಂಶವನ್ನು ಅಧಿಕೃತ ಅಂತರ್ಜಾಲ ತಾಣ karresults.nic.in ರಲ್ಲಿ ನೋಡಬಹುದು ಎಂದಿದೆ.
ರಾಜ್ಯದ 248 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 75,995 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.