ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ತಗ್ಗಿದ್ದು, ನವೆಂಬರ್ 18ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆ ಇರಲಿದೆ.
ಉತ್ತರ ಒಳನಾಡಿನ ರಾಯಚೂರು, ಕೊಪ‍್ಪಳ, ಹಾವೇರಿ, ಗದಗ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಭಾಗದಲ್ಲಿ ಶುಷ್ಕ ಹವಾಮಾನ ಇರಲಿದೆ.
ಮಂಗಳವಾರ ಗದಗದಲ್ಲಿ14.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ 3 ಹಾಗೂ ಬೆಳ್ತಂಗಡಿಯಲ್ಲಿ 1 ಸೆಂ.ಮೀ. ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.