ADVERTISEMENT

ಭಾನುವಾರ ರಾಜ್ಯದ ಕೆಲವೆಡೆ ಭಾರಿ ಮಳೆ ಸಾಧ್ಯತೆ

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಭಾನುವಾರ ಭಾರಿ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ನಾಲ್ಕು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2024, 14:42 IST
Last Updated 28 ಸೆಪ್ಟೆಂಬರ್ 2024, 14:42 IST
ಬೀದರ್‌ನಲ್ಲಿ ಭಾನುವಾರ ಜೋರು ಮಳೆ ಸುರಿದಿದ್ದು, ಶಿವನಗರ ಮುಖ್ಯರಸ್ತೆಯಲ್ಲಿ ಭಾರಿ ‍ಪ್ರಮಾಣದಲ್ಲಿ ನೀರು ನಿಂತಿತ್ತು
–ಪ್ರಜಾವಾಣಿ ಚಿತ್ರ
ಬೀದರ್‌ನಲ್ಲಿ ಭಾನುವಾರ ಜೋರು ಮಳೆ ಸುರಿದಿದ್ದು, ಶಿವನಗರ ಮುಖ್ಯರಸ್ತೆಯಲ್ಲಿ ಭಾರಿ ‍ಪ್ರಮಾಣದಲ್ಲಿ ನೀರು ನಿಂತಿತ್ತು –ಪ್ರಜಾವಾಣಿ ಚಿತ್ರ   

ಬೆಂಗಳೂರು: ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಭಾನುವಾರ ಭಾರಿ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ನಾಲ್ಕು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಹಾಸನ, ಕೊಡಗು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ಬೆಂಗಳೂರಿನಲ್ಲಿ ಭಾನುವಾರ ಹಾಗೂ ಸೋಮವಾರ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.