ಬೆಂಗಳೂರು: ರಾಜ್ಯದ ಬಳ್ಳಾರಿ, ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರು ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ಮಾಹಿತಿ ನೀಡಿದ್ದು, ಈ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಜಿಲ್ಲೆಯಲ್ಲಿ ಜೋರು ಮಳೆಯಾಗಲಿದ್ದು, ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರಿನಲ್ಲಿ 6 ಸೆಂ.ಮೀ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ 5 ಸೆಂ.ಮೀ. ಹಾಗೂ ಚಾಮರಾಜನಗರ ಜಿಲ್ಲೆಯ ಬೇಗೂರಿನಲ್ಲಿ 4 ಸೆಂ.ಮೀ. ಮಳೆ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.