ADVERTISEMENT

ರಾಜ್ಯದ ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮನ್ಸೂಚನೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2023, 15:33 IST
Last Updated 9 ಸೆಪ್ಟೆಂಬರ್ 2023, 15:33 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಭಾನುವಾರ ಹಾಗೂ ಸೋಮವಾರ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಒಳನಾಡು ಜಿಲ್ಲೆಗಳಲ್ಲಿ ಬಿರುಗಾಳಿಯು ಗಂಟೆಗೆ 30–40 ಕಿ.ಮೀ ವೇಗದಲ್ಲಿ ಬೀಸಲಿದೆ. ಕರಾವಳಿ ವ್ಯಾಪ್ತಿಯಲ್ಲಿ ಗಾಳಿ ಗಂಟೆಗೆ 40 ಕಿ.ಮೀನಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.

ADVERTISEMENT

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.