ADVERTISEMENT

Karnataka Rains | ಆರು ಜಿಲ್ಲೆಗಳಿಗೆ ‘ಯೆಲ್ಲೂ ಅಲರ್ಟ್‌’

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2024, 14:12 IST
Last Updated 17 ಅಕ್ಟೋಬರ್ 2024, 14:12 IST
<div class="paragraphs"><p>ಮಳೆ</p></div>

ಮಳೆ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ರಾಜ್ಯದ ಆರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಿರುವ ಹವಾಮಾನ ಇಲಾಖೆ, ಈ ಜಿಲ್ಲೆಗಳಲ್ಲಿ ಶುಕ್ರವಾರವೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ADVERTISEMENT

ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಕೆಲವು ಪ್ರದೇಶಗಳು ಸೇರಿದಂತೆ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಪ್ರತಿ ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ, ಮೀನುಗಾರರು ಎಚ್ಚರವಹಿಸಬೇಕು ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಾಧಾರಣ ಪ್ರಮಾಣದಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.