ADVERTISEMENT

Karnataka Rains | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ; ‘ಯೆಲ್ಲೊ ಅಲರ್ಟ್’ ಘೋಷಣೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2024, 15:42 IST
Last Updated 21 ಆಗಸ್ಟ್ 2024, 15:42 IST
ಮಳೆಯಲ್ಲೇ ಸಾಗುತ್ತಿರುವ ವಾಹನಗಳು
ಮಳೆಯಲ್ಲೇ ಸಾಗುತ್ತಿರುವ ವಾಹನಗಳು    -ಪ್ರಜಾವಾಣಿ ಚಿತ್ರ

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. 

ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ 25ರವರೆಗೂ ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರಿಯುವ ಸಂಭವವಿದ್ದು, ಶುಕ್ರವಾರದಿಂದ ಮೂರು ದಿನಗಳು ಉಡುಪಿ, ದಕ್ಷಿಣ ಕನ್ನಡದ ಜತೆಗೆ ಉತ್ತರ ಕನ್ನಡ ಜಿಲ್ಲೆಗೂ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. 

ಮುಂದಿನ ಐದು ದಿನಗಳು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.