ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರ ಮತವನ್ನು ಅಸಿಂಧುಗೊಳಿಸುವಂತೆ ಚುನಾವಣಾಧಿಕಾರಿ ಮುಂದೆ ಬಿಜೆಪಿ ಬೇಡಿಕೆ ಇಟ್ಟಿದೆ.
ರೇವಣ್ಣ ಅವರು ಮತ ಚಲಾಯಿಸಿದ ಬಳಿಕ ಮತಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತೋರಿಸಿದ್ದರು.
ಇದನ್ನೂ ಓದಿ:ರಾಜ್ಯಸಭೆ: ಬಿಜೆಪಿಯ 75, ಕಾಂಗ್ರೆಸ್ನ 23, ಜೆಡಿಎಸ್ನ 7 ಶಾಸಕರಿಂದ ಮತ ಚಲಾವಣೆ
ಅನ್ಯ ಪಕ್ಷದ ನಾಯಕರಿಗೆ ಮತಪತ್ರ ತೋರಿಸಿದ ಕಾರಣಕ್ಕಾಗಿ ರೇವಣ್ಣ ಅವರ ಮತವನ್ನು ಅಸಿಂಧುಗೊಳಿಸುವಂತೆ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಎಂ. ಸತೀಶ್ ರೆಡ್ಡಿ ಅವರು ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.