ಬೆಂಗಳೂರು: ದೋಸ್ತಿ ಸರ್ಕಾರದ ಎರಡನೇ ಬಜೆಟ್ ಅನ್ನು ಹಣಕಾಸು ಖಾತೆಹೊಂದಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರ ಮಂಡಿಸಲಿದ್ದಾರೆ.
ಬಜೆಟ್ ಮಂಡನೆಗೂಮೊದಲು ಬೆಳಗ್ಗೆ 9 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಬಳಿಕ ನೇರವಾಗಿ ವಿಧಾನಸೌಧಕ್ಕೆ ತೆರಳಲಿರುವ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸುವರು.
ಹನ್ನೊಂದು ಗಂಟೆ ಸುಮಾರಿಗೆ ಸಂಪುಟ ಸಭೆ ನಡೆಯಲಿದ್ದು, ಅದರಲ್ಲಿ ಬಜೆಟ್‌ಗೆ ಒಪ್ಪಿಗೆ ಪಡೆಯಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಬಜೆಟ್ ಮಂಡನೆ ಆಗಲಿದೆ.
ಬಜೆಟ್ ಮಂಡನೆಗೆ ಮುನ್ನ ಸಚಿವ ಸಂಪುಟ ಸಭೆ ನಡೆಸುವುದು ರೂಢಿ.ಸಾಮಾನ್ಯವಾಗಿ ಬಜೆಟ್ ಮಂಡನೆ ದಿನ ಮಾಧ್ಯಮಗೋಷ್ಠಿ ನಡೆಸುವ ಪದ್ಧತಿ ಇಲ್ಲ. ಪ್ರತಿಪಕ್ಷ ಬಿಜೆಪಿ, ಮೈತ್ರಿ ಸರ್ಕಾರದ ಪತನಕ್ಕೆ ಹಾಗೂ ಶಾಸಕರ ರಾಜೀನಾಮೆ ಕೊಡಿಸಲು ತಯಾರಿ ಮಾಡಿಕೊಂಡಿರುವ ಸುಳಿವರಿತ ಮುಖ್ಯಮಂತ್ರಿ ಬಜೆಟ್‌ಗೂ ಮುನ್ನವೇ ಸುದ್ದಿಗೋಷ್ಠಿ ನಡೆಸಿ ಕೆಲವು ರಾಜಕೀಯ ನಿರ್ಧಾರಗಳನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.