ಬೆಂಗಳೂರು: ಕೋವಿಡ್ ಮಾರ್ಗಸೂಚಿ ಜಾರಿಯಲ್ಲಿರುವ ಅವಧಿಯಲ್ಲಿ ಮೃತಪಟ್ಟವರ ಅಂತ್ಯಸಂಸ್ಕಾರದಲ್ಲಿ ಗರಿಷ್ಠ ನಾಲ್ಕು ಜನರು ಭಾಗವಹಿಸಬಹುದು ಎಂದು ಸರ್ಕಾರ ಹೇಳಿದೆ.
ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ಕಠಿಣ ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ಜೂನ್ 7ರವರೆಗೆ ಬೆಳಗ್ಗೆ 6 ಗಂಟೆಯವರೆಗೆ ಪರಿಷ್ಕೃತ ಆದೇಶ ಜಾರಿಯಲ್ಲಿರುತ್ತದೆ.
ಈ ಅವಧಿಯಲ್ಲಿ ಕೋವಿಡ್ ಮತ್ತು ಇತರ ಕಾರಣಗಳಿಂದ ಮೃತರಾದ ವ್ಯಕ್ತಿಗಳ ಅಂತ್ಯ ಸಂಸ್ಕಾರಕ್ಕೆ ಕೋವಿಡ್ ಮಾರ್ಗಸೂಚಿ ಅನುಸಾರ ಅವಕಾಶ ಕಲ್ಪಿಸಿದೆ. ಅದಾದ ಬಳಿಕ ಮೃತರ ಅಸ್ತಿ ಅಥವಾ ಚಿತಾಭಸ್ಮ ವಿಸರ್ಜನೆಗೆ ತೆರಳುವುದಿದ್ದಲ್ಲಿ ಗರಿಷ್ಠ ನಾಲ್ಕು ಜನರು ಮಾತ್ರ ತೆರಳಬಹುದು ಎಂದು ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ.
ಅಲ್ಲದೆ, ಧಾರ್ಮಿಕ ವಿಧಿ-ವಿಧಾನ ಪಾಲನೆಗೆ ಅವಕಾಶವಿದ್ದು, ಸಾರ್ವಜನಿಕರಾಗಲೀ ಮತ್ತು ಪ್ರಾಧಿಕಾರಗಳಾಗಲೀ ಅಡ್ಡಿಪಡಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.