ADVERTISEMENT

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಸಂಭವ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಅಕ್ಟೋಬರ್ 2024, 5:02 IST
Last Updated 30 ಅಕ್ಟೋಬರ್ 2024, 5:02 IST
   

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮಳೆಯ ಅಬ್ಬರ ತಗ್ಗಿದೆ. ಆದರೆ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ. 

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ.

ಜತೆಗೆ ಉತ್ತರ ಒಳನಾಡು ಜಿಲ್ಲೆಗಳಿಗೆ ನವೆಂಬರ್ 1, 2 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ ಎಂದು ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

ADVERTISEMENT

ನಾಳೆ (ಅ.31) ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ನವೆಂಬರ್‌ 1– 2ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. 

ಇನ್ನು, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ವಿಜಯನಗರ, ಧಾರವಾಡ, ಬೀದರ್, ಬೆಳಗಾವಿ, ಯಾದಗಿರಿ, ಕಲಬುರಗಿ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. 

ಮಳೆಯೊಂದಿಗೆ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಚಳಿಯೂ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.