ADVERTISEMENT

ಸದೃಢ ರಾಷ್ಟ್ರ ಕಟ್ಟುತ್ತಿರುವ ಕರ್ನಾಟಕವೇ ಭಾರತಕ್ಕೆ ಮಾದರಿ: ಸಿಎಂ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಫೆಬ್ರುವರಿ 2024, 13:35 IST
Last Updated 4 ಫೆಬ್ರುವರಿ 2024, 13:35 IST
<div class="paragraphs"><p>ಸಿಎಂ ಸಿದ್ದರಾಮಯ್ಯ</p></div>

ಸಿಎಂ ಸಿದ್ದರಾಮಯ್ಯ

   

ಬೆಂಗಳೂರು: ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ಹಣವು ರಾಜ್ಯದ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರ ಭಾರತದ ರಾಜ್ಯಗಳ ಪಾಲಾಗುತ್ತಿದೆ. ಶ್ರಮದಿಂದ ಸದೃಢ ರಾಷ್ಟ್ರ ಕಟ್ಟುತ್ತಿರುವ ಕರ್ನಾಟಕವೇ ಭಾರತಕ್ಕೆ ಮಾದರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ ಅಭಿಯಾನ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ದಕ್ಷಿಣ ಭಾರತದ ರಾಜ್ಯಗಳ ತೆರಿಗೆಯ ಋಣದಲ್ಲಿರುವ ಉತ್ತರದ ರಾಜ್ಯಗಳು ಎಂದಿಗೂ ನಮಗೆ ಮಾದರಿ ಆಗಲಾರವು. ಈ ಹುಸಿ ಕಲ್ಪನೆಯಿಂದ ಎಲ್ಲರೂ ಹೊರಬರಬೇಕು ಎಂದು ಕುಟುಕಿದ್ದಾರೆ.

ADVERTISEMENT

‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಟ್ವಿಟರ್‌ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದರು.

‘ಕೂತು ತಿನ್ನುವವನಿಗೆ ಮೃಷ್ಟಾನ್ನ ಕೊಟ್ಟು, ದುಡಿಯುವ ಮಗನಿಗೆ ಬರೆ ಎಳೆದರು‘ ಎಂಬಂತಿದೆ ದೇಶದಲ್ಲಿ ಕನ್ನಡಿಗರ ಸ್ಥಿತಿ. ಇದು ಬದಲಾಗಲೇಬೇಕು. ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿರುವ ನಾಡಿನ ಪ್ರಜ್ಞಾವಂತರಿಗೆ ನನ್ನ ಧನ್ಯವಾದಗಳು. ನಿಮ್ಮ ಜೊತೆ ನಾನಿದ್ದೇನೆ, ನಮ್ಮೆಲ್ಲರ ಧ್ವನಿ ಒಟ್ಟಾದರೆ ದೆಹಲಿಯವರೆಗೆ ಕೇಳುವುದು ಶತಸಿದ್ಧ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.