ಬೆಂಗಳೂರು: ‘ನೆರೆಯ ರಾಜ್ಯಗಳಿಗೆ ಭರಪೂರ ಕೊಡುಗೆಗಳನ್ನು ನೀಡುತ್ತಿರುವ ಕೇಂದ್ರ ಸರ್ಕಾರ, ಕರ್ನಾಟಕದಬಗ್ಗೆ ತಾರತಮ್ಯಧೋರಣೆ ತಾಳುತ್ತಿದೆ. ಈಗಲಾದರೂ ಮೈಸೂರಿನ ಕನ್ನಡ ಉನ್ನತ ಅಧ್ಯಯನ ಕೇಂದ್ರಕ್ಕೆ ವಾರ್ಷಿಕ ₹ 10 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್ ಆಗ್ರಹಿಸಿದ್ದಾರೆ.
‘ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ನಿರ್ಮಿಸಿರುವ 11 ನೂತನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ತಮಿಳು ಶಾಸ್ತ್ರೀಯ ಅಧ್ಯಯನದ ಕೇಂದ್ರೀಯ ಸಂಸ್ಥೆಯ ಕ್ಯಾಂಪಸ್‌ಗೆ ಬುಧವಾರ ಚಾಲನೆ ದೊರೆತಿದೆ. ತಮಿಳುನಾಡಿನಲ್ಲಿಬಿಜೆಪಿಯಿಂದ ಒಬ್ಬರು ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಇಲ್ಲಿಂದ25 ಮಂದಿಯನ್ನು ಕಳುಹಿಸಲಾಗಿದೆ. ಆದರೆ,ಕೇಂದ್ರ ಸರ್ಕಾರ ಇಲ್ಲಿಗೆ ಅಂತಹ ಕೊಡುಗೆ ನೀಡಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾದ ಸಂಸದರು ತಾರತಮ್ಯದ ಬಗ್ಗೆಧ್ವನಿ ಎತ್ತದೆ ಇರುವುದು ವಿಷಾದನೀಯ.ಮೈಸೂರಿನ ಕೇಂದ್ರೀಯ ಭಾಷಾ ಸಂಸ್ಥಾನದ (ಸಿಐಐಎಲ್) ಉನ್ನತ ಕನ್ನಡ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತ ಸ್ಥಾನಮಾನ ಕೊಡಬೇಕೆಂದು ಪರಿಷತ್ತಿನ ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಕೇಂದ್ರ ಸರ್ಕಾರಕ್ಕೆ ಅನೇಕ ಬಾರಿ ಆಗ್ರಹಿಸಿದ್ದೆ. ಆದರೆ, ಕೇಂದ್ರ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.