ADVERTISEMENT

ಅ.16ರಂದು ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2024, 22:55 IST
Last Updated 10 ಅಕ್ಟೋಬರ್ 2024, 22:55 IST
ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿ ಬಳಿ ಕಾವೇರಿ 5ನೇ ಹಂತದ ನೀರು ಸರಬರಾಜು ಯೋಜನೆಯ ಪಂಪ್‌ಹೌಸ್‌ ಅನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರೊಂದಿಗೆ ವೀಕ್ಷಿಸಿದರು
ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿ ಬಳಿ ಕಾವೇರಿ 5ನೇ ಹಂತದ ನೀರು ಸರಬರಾಜು ಯೋಜನೆಯ ಪಂಪ್‌ಹೌಸ್‌ ಅನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರೊಂದಿಗೆ ವೀಕ್ಷಿಸಿದರು   

ಮಂಡ್ಯ: ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿ (ಟಿ.ಕೆ.ಹಳ್ಳಿ) ಅ.16ರಂದು ಬೆಳಿಗ್ಗೆ 10.30 ಗಂಟೆಗೆ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಸಮಾರಂಭವನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಲೋಕಾರ್ಪಣೆ ಮಾಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಅವರು ಭಾಗವಹಿಸಲಿದ್ದಾರೆ.

ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ. ಜಾರ್ಜ್, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಭಾಗವಹಿಸಲಿದ್ದಾರೆ.

ADVERTISEMENT

ಮನೆ– ಮನೆಗೂ ಕಾವೇರಿ ನೀರು ತಲುಪಿಸುವ ಈ ಯೋಜನೆಯಲ್ಲಿ 4 ಲಕ್ಷ ನಳ ಸಂಪರ್ಕಗಳಿದ್ದು, 50 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ. ಯೋಜನೆಗೆ ತಗುಲಿರುವ ಒಟ್ಟು ವೆಚ್ಚ ₹4,336 ಕೋಟಿ. ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು ಸರಬರಾಜಾಗಲಿದ್ದು, ಯಲಹಂಕ, ಯಶವಂತಪುರ, ಬೆಂಗಳೂರು ದಕ್ಷಿಣ, ಬ್ಯಾಟರಾಯನಪುರ, ಬೊಮ್ಮನಹಳ್ಳಿ ವಲಯದ ಮನೆ– ಮನೆಗೂ ಕಾವೇರಿ ನೀರು ಪೂರೈಕೆಯಾಗಲಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.