ADVERTISEMENT

ಗೊಂದಲ, ಗುಂಪುಗಾರಿಕೆಯಿಂದ ಪಕ್ಷ ನಲುಗಿ ಹೋಗಿದೆ: ಕಾಂಗ್ರೆಸ್‌ ನಾಯಕ ಕೋಳಿವಾಡ

​ಪ್ರಜಾವಾಣಿ ವಾರ್ತೆ
Published 27 ಜನವರಿ 2020, 20:05 IST
Last Updated 27 ಜನವರಿ 2020, 20:05 IST
   

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ವಿಧಾನಸಭೆ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಅಸಮಾಧಾನ ಹೊರಹಾಕಿದ್ದಾರೆ.

ಗೊಂದಲ ಹಾಗೂ ಗುಂಪುಗಾರಿಕೆ ಯಿಂದ ಪಕ್ಷ ನಲುಗಿ ಹೋಗಿದೆ. ಕಾಂಗ್ರೆಸ್ ನಿಂತ ನೀರಾಗಿದ್ದು, ಪಕ್ಷದಲ್ಲಿ ಚಟುವಟಿಕೆಗಳು ಕುಂಠಿತಗೊಂಡಿವೆ ಎಂದು ಸುದ್ದಿಗಾರರಿಗೆ ಸೋಮವಾರ ತಿಳಿಸಿದರು.

‘ಕೆಪಿಸಿಸಿ ಅಧ್ಯಕ್ಷ, ವಿರೋಧ ಪಕ್ಷದ ನಾಯಕರು ನೀಡಿರುವ ರಾಜೀನಾಮೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಎಲ್ಲವೂ ಹೈಕಮಾಂಡ್ ಎನ್ನುತ್ತಾರೆ. ತಾವೇ ದೆಹಲಿಗೆ ಹೋಗಿ ಷರತ್ತು ಹಾಕಿ ಬರುತ್ತಾರೆ. ಇಂತಹವರೇ ಅಧ್ಯಕ್ಷ, ಕಾರ್ಯಾಧ್ಯಕ್ಷರು ಆಗಬೇಕು ಎಂದು ಒತ್ತಾಯಿಸುತ್ತಾರೆ’ ಎಂದು ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು.

ADVERTISEMENT

ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಎಲ್ಲದಕ್ಕೂ ನೇತೃತ್ವ ವಹಿಸಿಕೊಳ್ಳಬೇಕು. ದೆಹಲಿಗೆ ಹೋಗಿ ಬಂದ ನಾಯಕರೆಲ್ಲ ಒಗ್ಗಟ್ಟು ಪ್ರದರ್ಶಿಸಬೇಕು. ಅಧಿಕಾರಕ್ಕಾಗಿ ಪಕ್ಷದಲ್ಲಿ ಇದ್ದರೆ ಪ್ರಯೋಜನವಿಲ್ಲ. ಪಕ್ಷದ ಹಿತಕ್ಕಾಗಿ ತ್ಯಾಗ ಮಾಡಬೇಕು ಎಂದು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.