ADVERTISEMENT

ದಂತ ವೈದ್ಯಕೀಯ: ಅರ್ಜಿ ಸಲ್ಲಿಕೆಗೆ 10ರವರೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 8 ಜುಲೈ 2024, 16:21 IST
Last Updated 8 ಜುಲೈ 2024, 16:21 IST
   

ಬೆಂಗಳೂರು: ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ (ನೀಟ್‌–ಎಂಡಿಎಸ್‌) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಜುಲೈ 10ರ ಬೆಳಿಗ್ಗೆ 11ರ ಒಳಗೆ ಅರ್ಜಿ ಸಲ್ಲಿಸಿ, ಸಂಜೆ 6ರ ಒಳಗೆ ಶುಲ್ಕ ಪಾವತಿಸಬೇಕು. ನೀಟ್‌ ಎಂಡಿಎಸ್‌ನಲ್ಲಿ ನಿಗದಿಪಡಿಸಿರುವ ಕನಿಷ್ಠ ಅಂಕ ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳು ಮಾತ್ರ ಅರ್ಹರಿರುತ್ತಾರೆ. ಹೊರರಾಜ್ಯದ ಅಭ್ಯರ್ಥಿಗಳಿಗೆ ಜಾತಿ ಮೀಸಲು ಅನ್ವಯಿಸುವುದಿಲ್ಲ. ಅಂಥವರು ಸಾಮಾನ್ಯ ವರ್ಗಕ್ಕೆ ನಿಗದಿಪಡಿಸಿರುವ ಕನಿಷ್ಠ ಅಂಕಗಳನ್ನು ಪಡೆದಿರಬೇಕು ಎಂದು ಕೆಇಎ ಹೇಳಿದೆ.

ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಗಾಗಿ ಜುಲೈ 8ರಿಂದ ಪೋರ್ಟಲ್‌ ತೆರೆಯಲಾಗಿದೆ. ಶುಲ್ಕ ಪಾವತಿಸುವ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆಗಾಗಿ ಮಲ್ಲೇಶ್ವರದ ಕೆಇಎ ಕಚೇರಿಗೆ ಜುಲೈ 9ರಿಂದ 11ರವರೆಗೆ ಭೇಟಿ ನೀಡಬಹುದು.  

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.