ADVERTISEMENT

KEA: ನ. 24ರಂದು ಕೆ–ಸೆಟ್, ರಾಯಚೂರು ವಿವಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2024, 16:11 IST
Last Updated 22 ನವೆಂಬರ್ 2024, 16:11 IST
<div class="paragraphs"><p>ಕೆಇಎ</p></div>

ಕೆಇಎ

   

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಹಾಗೂ ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗಳು ನ. 24ರಂದು ನಡೆಯಲಿದ್ದು, ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. 

41 ವಿಷಯಗಳಿಗೆ ನಡೆಯುವ ಕೆ-ಸೆಟ್ ಪರೀಕ್ಷೆಯನ್ನು 1.05 ಲಕ್ಷ ಅಭ್ಯರ್ಥಿಗಳು ತೆಗೆದುಕೊಂಡಿದ್ದಾರೆ. ಬೆಂಗಳೂರು, ಬೆಳಗಾವಿ, ಬಳ್ಳಾರಿ, ಬೀದರ್‌, ದಾವಣಗೆರೆ, ಧಾರವಾಡ, ಕಲಬುರಗಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ, ವಿಜಯಪುರ ಸೇರಿದಂತೆ 12 ಜಿಲ್ಲೆಗಳ 252 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯನ್ನು ಸುಮಾರು ಎರಡು ಸಾವಿರ ವಿದ್ಯಾರ್ಥಿಗಳು ತೆಗೆದುಕೊಂಡಿದ್ದಾರೆ. ಈ ಪರೀಕ್ಷೆ ಬೆಂಗಳೂರು ನಗರದ ಮೂರು ಕೇಂದ್ರಗಳಲ್ಲಿ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.

ADVERTISEMENT

ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪರೀಕ್ಷೆಗಳು ನಡೆಯಲಿವೆ. ಒಮ್ಮೆಗೇ ಎರಡೂ ಪತ್ರಿಕೆಗಳ (ಪತ್ರಿಕೆ 1 ಮತ್ತು 2) ಪ್ರಶ್ನೆ ಪತ್ರಿಕೆಗಳನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಮೂರು ಗಂಟೆಯಲ್ಲಿ 100 ಅಂಕಗಳ ಸಾಮಾನ್ಯ ಜ್ಞಾನ ಮತ್ತು 200 ಅಂಕಗಳ ವಿಷಯವಾರು ಪತ್ರಿಕೆಗಳಿಗೆ ಉತ್ತರಿಸಬೇಕು ಎಂದು ಅವರು ಸೂಚನೆ  ನೀಡಿದ್ದಾರೆ.

ರಾಯಚೂರು ವಿಶ್ವವಿದ್ಯಾಲಯದ ಪರೀಕ್ಷೆಗೆ ಮಾತ್ರ ಋಣಾತ್ಮಕ ಮೌಲ್ಯಮಾಪನ ಇರುತ್ತದೆ. ಕೆ-ಸೆಟ್‌ ಪರೀಕ್ಷೆಗೆ ಆ ರೀತಿ ಇರುವುದಿಲ್ಲ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಗಳ ಪ್ರವೇಶಕ್ಕೂ ಮುನ್ನ ಅಭ್ಯರ್ಥಿಗಳನ್ನು ತಪಾಸಣೆಗೆ ಒಳಪಡಿಸಲಾಗುವುದು. ಎಲ್ಲ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ, ಅಗತ್ಯ ಪೊಲೀಸ್‌ ಮತ್ತು ಗೃಹ ರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.