ಬೆಂಗಳೂರು: ಪ್ರಸಕ್ತ ಸಾಲಿನ ‘ಕೆಂಪೇಗೌಡ ಅಂತರರಾಷ್ಟ್ರೀಯ ಪ್ರಶಸ್ತಿ’ಗೆ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಉದ್ಯಮಿ ನಿತಿನ್ ಕಾಮತ್ ಮತ್ತು ಜಯದೇವ ಹೃದ್ರೋಗ ಆಸ್ಪತ್ರೆ ಯನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಗೆ ಆಯ್ಕೆಯಾದವರ ಹೆಸರನ್ನು ಸೋಮವಾರ ಪ್ರಕಟಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ (ಜೂನ್ 27) ನಡೆಯಲಿರುವ ಕೆಂಪೇಗೌಡ 514ನೇ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ತಲಾ ₹5 ಲಕ್ಷ ನಗದು ಜೊತೆ ಗೌರವ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದರು.
ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್. ಶಂಕರ್ ನೇತೃತ್ವದಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯು ಪ್ರಶಸ್ತಿಗೆ ಅರ್ಹರಾದ ವರನ್ನು ಆಯ್ಕೆ ಮಾಡಿದೆ.
ಬೆಂಗಳೂರಿನಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಅದಿತಿ ಅಶೋಕ್, ಟೋಕಿಯೊ ಒಲಿಂಪಿಕ್ಸ್‌ನಲ್ಲಿ
4ನೇ ಸ್ಥಾನದ ಪಡೆದಿದ್ದರು. ಅವರು ವಿಶ್ವ ಕ್ರಮಾಂಕದಲ್ಲಿ ಅಗ್ರ 50ರಲ್ಲಿ ಕಾಣಿಸಿಕೊಂಡ ಮೊದಲ ಭಾರತೀಯ ಗಾಲ್ಫ್ ಆಟಗಾರ್ತಿ. ಶಿವಮೊಗ್ಗದವರಾದ ನಿತಿನ್ ಕಾಮತ್ ಅವರು ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಜಿನಿಯರಿಂಗ್ ಪದವಿ ಪಡೆದವರು. ನಿತಿನ್ ಕಾಮತ್ ಅವರು 2010ರಲ್ಲಿ ತಮ್ಮ ಸಹೋದರ ನಿಖಿಲ್ ಕಾಮತ್ ಜೊತೆ ಸೇರಿ ಡಿಸ್ಕೌಂಟ್ ಬ್ರೋಕರೇಜ್ ಸಂಸ್ಥೆ ಝೀರೋಧ ಸ್ಥಾಪಿಸಿದರು. ಇಂದು ದೇಶದ ಅತಿದೊಡ್ಡ ಆನ್‌ಲೈನ್ ಬ್ರೋಕರೇಜ್ ಸಂಸ್ಥೆಗಳಲ್ಲಿ ಇದು ಒಂದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.