ಬೆಂಗಳೂರು: ಭೂಕುಸಿತದಿಂತ ತತ್ತರಿಸಿರುವ ಕೇರಳಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೇರಳ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ, ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.
ಪರಿಹಾರ ಕಾರ್ಯದಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಕೈ ಜೋಡಿಸಲಿದೆ. ಅಗತ್ಯ ನೆರವು ಒದಗಿಸಲು ಸಿದ್ಧವಾಗಿದೆ. ರಕ್ಷಣಾ ತಂಡಗಳು ಮತ್ತು ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.