ಲೈಂಗಿಕ ದೌರ್ಜನ್ಯದ ಪ್ರಕರಣ ಎದುರಿಸುತ್ತಿರುವ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಜಿಲ್ಲೆಯ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲೂ ರೇವಣ್ಣ ಮೊದಲ ಆರೋಪಿ (ಎ1) ಹಾಗೂ ಕೆ.ಆರ್. ನಗರ ತಾಲ್ಲೂಕಿನ ಹೆಬ್ಬಾಳು ಕೊಪ್ಪಲಿನ ಸತೀಶ್ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ.ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ನನ್ನ ತಾಯಿಯನ್ನು ಅಪಹರಿಸಿದ್ದಾರೆ ಎಂದು ಪುತ್ರ ರಾಜು ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.