ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಮಹಿಳೆಯೊಬ್ಬರ ಅಪಹರಣದ ಆರೋಪಿಯಾಗಿ ಸದ್ಯ ಎಸ್‌ಐಟಿ ಬಂಧನದಲ್ಲಿರುವ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ನಿಯಮಿತ (ರೆಗ್ಯುಲರ್) ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಕುರಿತ ಅರ್ಜಿಯನ್ನು ಎಚ್.ಡಿ.ರೇವಣ್ಣ ಪರ ವಕೀಲ ಪವನ್ ಸಾಗರ್ ಸೋಮವಾರ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್–82) ನ್ಯಾಯಾಧೀಶ ಸಂತೋಷ ಗಜಾನನ ಭಟ್ ಮುಂದೆ ಪ್ರಸ್ತುತಪಡಿಸಿದರು. ಅರ್ಜಿ ಪರಿಶೀಲಿಸಿದ ನ್ಯಾಯಾಧೀಶರು ಇದೇ 7ಕ್ಕೆ (ಮಂಗಳವಾರ) ವಿಚಾರಣೆ ನಿಗದಿಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.