ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲೆ ಇರುವ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣದ ಆರೋಪದಡಿ ಶಾಸಕ ಎಚ್.ಡಿ.ರೇವಣ್ಣ ಮತ್ತು ಏಳು ಜನರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಈ ಸಂಬಂಧ ಪ್ರಾಸಿಕ್ಯೂಷನ್ ಪರ ವಕೀಲರು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ (42ನೇ ಎಸಿಎಂಎಂ) ನ್ಯಾಯಾಲಯಕ್ಕೆ ಗುರುವಾರ ದೋಷಾರೋಪ ಪಟ್ಟಿ ಸಲ್ಲಿಸಿದರು. ಪಟ್ಟಿಯಲ್ಲಿ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ಅವರನ್ನು 8ನೇ ಆರೋಪಿ ಎಂದು ಪರಿಗಣಿಸಲಾಗಿದೆ.
ದೋಷಾರೋಪ ಪಟ್ಟಿಯಲ್ಲಿ, ‘ರೇವಣ್ಣ ಮತ್ತು ಭವಾನಿ ಆಣತಿಯ ಮೇರೆಗೆ ಸಂತ್ರಸ್ತೆಯ ಅಪಹರಣ ಮಾಡಲಾಗಿದೆ. ಆಕೆಯನ್ನು ಹೊಳೆನರಸೀಪುರಕ್ಕೆ ಕರೆಸಿ ಬೆದರಿಕೆ ಹಾಕಿ, ಏಳನೇ ಆರೋಪಿಯ ಮನೆಯಲ್ಲಿ ಇರಿಸಲಾಗಿತ್ತು. ಏಳನೇ ಆರೋಪಿ ರೇವಣ್ಣ ಅವರ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಕೆಲಸ ಮಾಡುತ್ತಾ ಇದ್ದರು ಎಂಬಂತಹ ಅಂಶಗಳು ಒಳಗೊಂಡಿವೆ’ ಎಂದು ಪ್ರಾಸಿಕ್ಯೂಷನ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.