ADVERTISEMENT

ಹೆಣ್ಣು ಭ್ರೂಣ ಹತ್ಯೆ | ಕೆ.ಆರ್. ಪೇಟೆ: ಸ್ಕ್ಯಾನಿಂಗ್ ಕೇಂದ್ರಕ್ಕೆ ಬೀಗ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2023, 19:52 IST
Last Updated 5 ಡಿಸೆಂಬರ್ 2023, 19:52 IST
ಕೆ.ಆರ್. ಪೇಟೆಯಲ್ಲಿನ ಹೊಸಹೊಳಲು ರಸ್ತೆಯಲ್ಲಿರುವ ನಾವಿ ಸ್ಕ್ಯಾನಿಂಗ್ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿದ ಉಪ ವಿಭಾಗಾಧಿಕಾರಿ ನಂದೀಶ್ ಹಾಗೂ ಜಿಲ್ಲಾ‌ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಜಿತ್ ನೇತೃತ್ವದ ತಂಡವು ಪರಿಶೀಲನೆ ನಡೆಸಿ ಬೀಗ ಹಾಕಿತು
ಕೆ.ಆರ್. ಪೇಟೆಯಲ್ಲಿನ ಹೊಸಹೊಳಲು ರಸ್ತೆಯಲ್ಲಿರುವ ನಾವಿ ಸ್ಕ್ಯಾನಿಂಗ್ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿದ ಉಪ ವಿಭಾಗಾಧಿಕಾರಿ ನಂದೀಶ್ ಹಾಗೂ ಜಿಲ್ಲಾ‌ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಜಿತ್ ನೇತೃತ್ವದ ತಂಡವು ಪರಿಶೀಲನೆ ನಡೆಸಿ ಬೀಗ ಹಾಕಿತು   

ಮಂಡ್ಯ: ಭ್ರೂಣಹತ್ಯೆ ಜಾಲ‌ ಪತ್ತೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿನ ಸ್ಲ್ಯಾನಿಂಗ್ ಕೇಂದ್ರಗಳ ತಪಾಸಣೆಗೆ ಅಧಿಕಾರಿಗಳು ಮುಂದಾಗಿದ್ದು, ನಿಯಮ ಪಾಲನೆ ಮಾಡದ ಆರೋಪದ ಮೇಲೆ ಕೆ.ಆರ್. ಪೇಟೆಯಲ್ಲಿನ ಹೊಸಹೊಳಲು ರಸ್ತೆಯಲ್ಲಿರುವ ನಾವಿ ಸ್ಕ್ಯಾನಿಂಗ್ ಕೇಂದ್ರಕ್ಕೆ ಬೀಗ ಜಡಿದಿದ್ದಾರೆ.

ಉಪ ವಿಭಾಗಾಧಿಕಾರಿ ನಂದೀಶ್ ಹಾಗೂ ಜಿಲ್ಲಾ‌ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಜಿತ್ ನೇತೃತ್ವದ ತಂಡವು ಮಂಗಳವಾರ ಇಲ್ಲಿನ ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ತಪಾಸಣೆ ನಡೆಸಿತು.

'ತಜ್ಞ ವೈದ್ಯರಿಲ್ಲದೇ ತಪಾಸಣೆ ನಡೆಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಪರಿಶೀಲನೆ ಕೈಗೊಂಡೆವು. ಆಗ ನಾವಿ ಕೇಂದ್ರದಲ್ಲಿ ಸರಿಯಾಗಿ ದಾಖಲೆಗಳನ್ನು ನಿರ್ವಹಿಸದೆ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದ್ದರಿಂದ ಕೇಂದ್ರಕ್ಕೆ ಬೀಗ ಹಾಕಲಾಯಿತು' ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.