ADVERTISEMENT

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಚೆನ್ನಮ್ಮ ಹೆಸರು: ಕೇಂದ್ರಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2024, 15:46 IST
Last Updated 17 ಅಕ್ಟೋಬರ್ 2024, 15:46 IST
ಬೆಳಗಾವಿ ವಿಮಾನ ನಿಲ್ದಾಣ
ಬೆಳಗಾವಿ ವಿಮಾನ ನಿಲ್ದಾಣ   

ಬೆಳಗಾವಿ: ಇಲ್ಲಿನ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ಹೆಸರಿಡಬೇಕು ಹಾಗೂ ವಿಮಾನ ನಿಲ್ದಾಣದ ಆವರಣದಲ್ಲಿ ಅವರ ಪ್ರತಿಮೆ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಕೇಂದ್ರ ನಾಗರಿಕ ವಿಮಾನಯಾನ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದರು. 

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಿತ್ತೂರು ಕರ್ನಾಟಕದ ನಾಯಕರು ಸಚಿವರನ್ನು ಭೇಟಿ ಮಾಡಿ ಈ ಮನವಿ ಸಲ್ಲಿಸಲಾಗಿದೆ. ರಾಣಿ ಚೆನ್ನಮ್ಮ ಅಂಚೆಚೀಟಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಲಾಗಿದೆ’ ಎಂದರು. 

‘ಕಿತ್ತೂರು ರಾಣಿ ಚೆನ್ನಮ್ಮ ಅವರ ವಿಜಯೋತ್ಸವಕ್ಕೆ 200 ವರ್ಷ ಪೂರ್ಣವಾಗಲಿದೆ. ಇದಕ್ಕಾಗಿ ಅಕ್ಟೋಬರ್ 23 ವಿಜಯೋತ್ಸವದ ದಿನವಾಗಿ ಆಚರಿಸಿಕೊಂಡು ಬರುತ್ತಿದ್ದೇವೆ’ ಎಂದರು. 

ADVERTISEMENT

‘ರಾಣಿ ಚೆನ್ನಮ್ಮ ಬಲಗೈ ಬಂಟ ಸಂಗೂಳ್ಳಿ ರಾಯಣ್ಣನ ಹೆಸರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ, ಬಸವಣ್ಣ ಹೆಸರನ್ನು ವಿಜಯಪುರ ನಿಲ್ದಾಣಕ್ಕೆ, ಕುವೆಂಪು ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಡಲು ಮನವಿ ಮಾಡಲಾಗಿದೆ. ಬೆಳಗಾವಿಯಿಂದ ಅನೇಕ ನಗರಗಳಿಗೆ ವಿಮಾನ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ. ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.