ADVERTISEMENT

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಚಿಂತನೆ: ವಿ. ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2024, 18:58 IST
Last Updated 16 ಸೆಪ್ಟೆಂಬರ್ 2024, 18:58 IST
<div class="paragraphs"><p>ವಿ. ಸೋಮಣ್ಣ</p></div>

ವಿ. ಸೋಮಣ್ಣ

   

ಬೆಳಗಾವಿ: 'ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಕೇಂದ್ರ ಚಿಂತನೆ ನಡೆಸಿದೆ' ಎಂದು ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದರು.

ಪುಣೆ-ಹುಬ್ಬಳ್ಳಿ ನಡುವಿನ ವಂದೇ ಭಾರತ್ ರೈಲನ್ನು ಸ್ವಾಗತಿಸಲು ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ರಾತ್ರಿನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು‌.

ADVERTISEMENT

'ಕೊಂಕಣ ರೈಲ್ವೆ ಜಾಲವು ಕೇರಳದಿಂದ ಮಹಾರಾಷ್ಟ್ರದವರೆಗೆ ಹರಡಿಕೊಂಡಿದೆ‌. ಪ್ರಯಾಣಿಕರಿಗೆ ಹೆಚ್ಚಿನ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ನಾವು ಇದನ್ನು ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸುವ ಬಗ್ಗೆ ಯೋಚಿಸುತ್ತಿದ್ದೇವೆ. ಕರ್ನಾಟಕ, ಕೇರಳ ಮತ್ತು ಗೋವಾ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಮಹಾರಾಷ್ಟ್ರಕ್ಕೆ ಮನವರಿಕೆ ಮಾಡಿದ ನಂತರ, ವಿಲೀನ ಪ್ರಕ್ರಿಯೆಯನ್ನು ಆರಂಭಿಸಲಾಗುವುದು' ಎಂದು ತಿಳಿಸಿದರು.

'ರಾಜ್ಯದ ಬಾಕಿ ಇರುವ ಹಲವು ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಮೂರು ವರ್ಷಗಳಲ್ಲಿ ಸಾಕಾರಗೊಳ್ಳಲಿದೆ. ಮೂರು ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗುವುದು' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.