ಬೆಂಗಳೂರು: ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ವಿರುದ್ಧ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಶಾಸಕ ರೋಷನ್ ಬೇಗ್‌ಗೆ ಕೆಪಿಸಿಸಿ ನೋಟಿಸ್ ನೀಡಿದೆ.
ಪಕ್ಷಕ್ಕೆ ಮುಜುಗರವಾಗುವಂತೆ ಮಾಧ್ಯಮಗಳಿಗೆ ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿರುವುದಕ್ಕೆ ನಿಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ತಾವು ನೀಡಿದ್ದ ಹೇಳಿಕೆ ಕುರಿತು ಒಂದು ವಾರದೊಳಗೆ ಸ್ಪಷ್ಟನೆ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಬೇಗ್, ‘ವೇಣುಗೋಪಾಲ್ ಅವರಂತಹ ಬಫೂನ್, ಸಿದ್ದರಾಮಯ್ಯ ಅವರಂತಹ ಅಹಂಕಾರಿ ಮತ್ತುದಿನೇಶ್ ಗುಂಡೂರಾವ್‌ರಂತಹ ಪ್ಲಾಫ್ ಅಧ್ಯಕ್ಷರಿಂದ ಕಾಂಗ್ರೆಸ್ ಉದ್ಧಾರ ಆಗಲ್ಲ’ ಎಂದು ವಾಗ್ದಾಳಿ ನಡೆಸಿದ್ದರು.
ಬೇಗ್ ನೀಡಿದ್ದ ಹೇಳಿಕೆ ಕಾಂಗ್ರೆಸ್‌ನ ಹಲವು ನಾಯಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.