ಬೆಂಗಳೂರು: ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ.ಪಿ. ರವೀಂದ್ರನಾಥ್ ಅವರುರಾಜೀನಾಮೆ ನೀಡಿರುವುದಕ್ಕೆಶಾಸಕಎಂ.ಪಿ. ರೇಣುಕಾಚಾರ್ಯ ಕಾರಣ ಎಂದುಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಶಿವಕುಮಾರ್,‘ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರ ಮಗಳು ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರವೀಂದ್ರನಾಥ್ ನೋಟಿಸ್ ಜಾರಿಗೊಳಿಸಿದ್ದರು. ಈ ಕಾರಣಕ್ಕಾಗಿ ಅವರ ವರ್ಗಾವಣೆ ಮಾಡಲಾಗಿತ್ತು ಎಂಬ ಮಾಹಿತಿ ಇದೆ’ ಎಂದು ಆರೋಪಿಸಿದ್ದಾರೆ.
‘ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಸೇರಿದಂತೆ ಯಾರೇ ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದರೂ ನಿಷ್ಪಕ್ಷಪಾತ ತನಿಖೆ ನಡೆಯಲಿ. ಡಿಸಿಆರ್‌ಇ ಡಿಜಿಪಿ ವರ್ಗಾವಣೆಯನ್ನು ರದ್ದುಗೊಳಿಸಬೇಕು. ಅವರ ರಾಜೀನಾಮೆ ಪತ್ರವನ್ನೂಅಂಗೀಕರಿಸಬಾರದು’ ಎಂದು ಒತ್ತಾಯಿಸಿದ್ದಾರೆ.
ರವೀಂದ್ರನಾಥ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಮಂಗಳವಾರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಡಿಜಿಪಿ ಆಗಿದ್ದ ರವೀಂದ್ರನಾಥ್ ಅವರನ್ನು ಪೊಲೀಸ್ ತರಬೇತಿ ವಿಭಾಗಕ್ಕೆ ಇತ್ತೀಚೆಗಷ್ಟೇ ವರ್ಗಾಯಿಸಲಾಗಿತ್ತು. ಸೋಮವಾರವಷ್ಟೇ ಅವರು ಅಧಿಕಾರ ವಹಿಸಿಕೊಂಡಿದ್ದರು.
ಇವನ್ನೂ ಓದಿ
*ಡಿಜಿಪಿ ಹುದ್ದೆಗೆ ರವೀಂದ್ರನಾಥ್ ರಾಜೀನಾಮೆ
*ವರ್ಗಾವಣೆಗೆ ಬೇಸರ: ರವೀಂದ್ರನಾಥ್ ರಾಜೀನಾಮೆ ಅಂಗೀಕರಿಸದಂತೆ ಎಚ್ಡಿಕೆ ಆಗ್ರಹ
*ಡಿಜಿಪಿ ಡಾ. ರವೀಂದ್ರನಾಥ್ ರಾಜೀನಾಮೆ ಅಂಗೀಕಾರ ಬೇಡ: ವಿಪಕ್ಷಗಳ ಆಗ್ರಹ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.