ಬೆಂಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಆಯನೂರು ಮಂಜುನಾಥ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಲಾಗಿದೆ.
‘ಕಾಂಗ್ರೆಸ್ ಪಕ್ಷದ ವಿಚಾರಧಾರೆಗಳನ್ನು ಮತ್ತು ಸರ್ಕಾರದ ಯೋಜನೆಗಳನ್ನು ಮಾಧ್ಯಮಗಳಲ್ಲಿ ಬಿಂಬಿಸಬೇಕೆಂಬ ಉದ್ದೇಶದಿಂದ ಆಯನೂರು ಮಂಜುನಾಥ್ ಅವರಿಗೆ ಈ ಹೊಣೆಗಾರಿಕೆ ನೀಡಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಬಿಜೆಪಿ ಸದಸ್ಯರಾಗಿದ್ದ ಆಯನೂರು ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದರು. ಆದರೆ, ಬಿಜೆಪಿ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಸೋಲು ಕಂಡ ಕಾರಣ ಕಾಂಗ್ರೆಸ್ ಕದ ತಟ್ಟಿದ್ದ ಅವರು, ವಿಧಾನ ಪರಿಷತ್‌ಗೆ ನೈರುತ್ಯ ಪದವೀಧರ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯೂ ಆಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.