ADVERTISEMENT

ಕೆ.ಆರ್.ಪುರ ಸಂತೆ ಮೈದಾನ ಟೆಂಡರ್‌: ಹೈಕೋರ್ಟ್‌ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2024, 16:09 IST
Last Updated 29 ಅಕ್ಟೋಬರ್ 2024, 16:09 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಕೆ.ಆರ್.ಪುರ ಸಂತೆ ಮೈದಾನದಲ್ಲಿ ವ್ಯಾಪಾರಿಗಳಿಂದ ತೆರಿಗೆ ಸಂಗ್ರಹಿಸಲು ಕರೆಯಲಾಗಿರುವ ಇ–ಟೆಂಡರ್ ಪ್ರಶ್ನಿಸಿದ ಅರ್ಜಿಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ‘ಅಖಿಲ ಕರ್ನಾಟಕ ರೈತರ ಮತ್ತು ವ್ಯಾಪಾರಿಗಳ ಸಂಘ’ದ ಅಧ್ಯಕ್ಷ ಎಲೆ ಶ್ರೀನಿವಾಸ್ ವಿ. ಸೇರಿದಂತೆ ಹಣ್ಣು, ತರಕಾರಿ ಮಾರಾಟ ಮಾಡುವ ಒಟ್ಟು ಏಳು ಜನರು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್‌ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿತು.

ಅರ್ಜಿಯಲ್ಲಿ ಏನಿದೆ?: ‘ಕೆ.ಆರ್.ಪುರ ಸಂತೆ ಮೈದಾನದಲ್ಲಿ ನಡೆಯುವ ವಾರದ ಸಂತೆ ಸುಂಕ ಮತ್ತು ದಿನವಹಿ ಸಂತೆ ಸುಂಕವನ್ನು ಒಂದು ವರ್ಷದ ಅವಧಿಗೆ ವಸೂಲು ಮಾಡುವ ಬಗ್ಗೆ ಕೆ.ಆರ್.ಪುರ ಮಹದೇವಪುರ ವಲಯದ ಕಾರ್ಯಪಾಲಕ ಎಂಜಿನಿಯರ್ (ಯೋಜನೆ) 2024ರ ಸೆಪ್ಟೆಂಬರ್ 4ರಂದು ಕರೆದಿರುವ ಇ–ಟೆಂಡರ್‌ ಹರಾಜು; ಮಾರುಕಟ್ಟೆಯ ಗಡಿ ರೇಖೆ ಗುರುತಿಸುವಲ್ಲಿನ ತಾಂತ್ರಿಕ ದೋಷಗಳಿಂದ ಕೂಡಿದ್ದು ಅದನ್ನು ರದ್ದುಗೊಳಿಸಲು ಆದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.