ಬೆಂಗಳೂರು: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಭಗ್ನಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಸ್ಯಾಂಡಲ್‌ವುಡ್ ನಟ ದರ್ಶನ್ ಕಿಡಿಕಾರಿದ್ದಾರೆ. ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.
'ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವ ದಿನದಂದು ಮರಣ ಹೊಂದಿರುವ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಲಾಗಿದೆ. ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು.' ಎಂದು ನಟ ದರ್ಶನ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.
ಬೆಳಗಾವಿಯ ಅನಗೋಳದ ಕನಕದಾಸ ಕಾಲೊನಿಯಲ್ಲಿ ಪ್ರತಿಷ್ಠಾಪಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಶನಿವಾರ ಬೆಳಗಿನ ಜಾವ 3ರ ಸುಮಾರಿಗೆ ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ಮುಖದ ಭಾಗವನ್ನು ವಿರೂಪಗೊಳಿಸಿದ್ದಾರೆ. ಇದಕ್ಕಾಗಿ ತಲ್ವಾರ್ ಬಳಸಿದ್ದಾರೆ. ಪ್ರತಿಮೆಯಲ್ಲಿದ್ದ ಖಡ್ಗವನ್ನು ಕಿತ್ತು ಹಾಕಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.