ADVERTISEMENT

ಕೆ-ಸೆಟ್, ರಾಯಚೂರು ವಿವಿ ಪರೀಕ್ಷೆ ಸುಗಮ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2024, 14:15 IST
Last Updated 24 ನವೆಂಬರ್ 2024, 14:15 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ‘ಕೆ-ಸೆಟ್’ ಮತ್ತು ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ಯಾವುದೇ ಗೊಂದಲ ಇಲ್ಲದೆ ಭಾನುವಾರ ನಡೆಯಿತು.

ಕೆ- ಸೆಟ್ ಪರೀಕ್ಷೆಗೆ ಶೇ 84 ರಷ್ಟು ಹಾಗೂ ರಾಯಚೂರು ವಿಶ್ವವಿದ್ಯಾಲಯದ ಪರೀಕ್ಷೆಗೆ ಶೇ 64ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

‘ಬೆಂಗಳೂರು, ಬೆಳಗಾವಿ, ಬಳ್ಳಾರಿ, ಬೀದರ್‌, ದಾವಣಗೆರೆ, ಧಾರವಾಡ, ಕಲಬುರಗಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ ಮತ್ತು ವಿಜಯಪುರ ಜಿಲ್ಲೆಗಳ ಒಟ್ಟು 252 ಕೇಂದ್ರಗಳಲ್ಲಿ ಕೆ–ಸೆಟ್ ಪರೀಕ್ಷೆ ನಡೆಯಿತು. ರಾಯಚೂರು ವಿಶ್ವವಿದ್ಯಾಲಯದ ನೇಮಕಾತಿಗೆ ಪರೀಕ್ಷೆ ಬೆಂಗಳೂರು ನಗರದಲ್ಲಿ ಮಾತ್ರ ನಡೆಯಿತು. ಈ ಪರೀಕ್ಷೆಯನ್ನು ವೆಬ್ ಕಾಸ್ಟಿಂಗ್ ಮೂಲಕ ಕೆಇಎಯಲ್ಲಿ ಸ್ಥಾಪಿಸಿದ್ದ ಕಮಾಂಡ್ ಸೆಂಟರ್‌ನಲ್ಲಿ ನಿಗಾ ವಹಿಸಲಾಯಿತು. ಯಾವುದೇ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಎಚ್ಚರ ವಹಿಸಲಾಗಿತ್ತು’ ಎಂದೂ ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.