ADVERTISEMENT

KSRTC ಬಸ್ ಚಾಲಕ ಮೊಬೈಲ್‌ನಲ್ಲಿ ಮಾತು: ಸಂಸ್ಥೆ ಗಮನಕ್ಕೆ ತಂದ ADGP ಅಲೋಕ್ ಕುಮಾರ್

ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಸಿಸಿಟಿವಿ ಮೂಲಕ ಸಿಕ್ಕಿಬಿದ್ದ KSRTC ಬಸ್ ಚಾಲಕ: ಕ್ರಮಕ್ಕೆ ಒತ್ತಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಮೇ 2024, 6:58 IST
Last Updated 17 ಮೇ 2024, 6:58 IST
<div class="paragraphs"><p>ಅಲೋಕ್ ಕುಮಾರ್, ಹಾಗೂ ಅವರು ಹಂಚಿಕೊಂಡಿರುವ ಚಿತ್ರ</p></div>

ಅಲೋಕ್ ಕುಮಾರ್, ಹಾಗೂ ಅವರು ಹಂಚಿಕೊಂಡಿರುವ ಚಿತ್ರ

   

alok kumar X

ಬೆಂಗಳೂರು: ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯವರನ್ನು (KSRTC) ಒತ್ತಾಯಿಸಿದ್ದಾರೆ.

ADVERTISEMENT

ಈ ಕುರಿತು ಅವರು ಮೈಸೂರು–ಬೆಂಗಳೂರು–ಎಕ್ಸ್‌ಪ್ರೆಸ್‌ ವೇನಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಚಾಲಕರು ನಮ್ಮ ಕಣ್ಣಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ನಮ್ಮ ಎಲ್ಲ ಸಿಸಿಟಿವಿಗಳು ಅವುಗಳ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಿವೆ. ಮೇ 11 ರಂದು ಚನ್ನಪಟ್ಟಣ ಬಳಿ ಕೆಎಸ್‌ಆರ್‌ಟಿಸಿ ಚಾಲಕ ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ್ದಾರೆ ಎಂದು ಫೋಟೊ ಸಮೇತ ಮಾಹಿತಿ ಹಂಚಿಕೊಂಡಿದ್ದಾರೆ.

ಹೈವೇನಲ್ಲಿ ನಮ್ಮ ಪೊಲೀಸ್ ಕ್ಯಾಮೆರಾಗಳು ತಮ್ಮ ಕೆಲಸ ಮಾಡುತ್ತಿವೆ. ಕೇವಲ 15 ದಿನದಲ್ಲಿ 12,192 ಸಂಚಾರ ನಿಯಮ ಉಲ್ಲಂಘನೆಗಳನ್ನು ಸೆರೆ ಹಿಡಿದಿವೆ. ಸಂಚಾರ ನಿಯಮ ಉಲ್ಲಂಘನೆಯಿಂದ ಅಪಘಾತವಾದರೆ ಅದನ್ನು ಕುಟುಂಬದವರು ಸಹಿಸಿಕೊಳ್ಳಲು ಸಾಧ್ಯವೇ? ಒಮ್ಮೆ ಯೋಚಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಕೆಎಸ್‌ಆರ್‌ಟಿಸಿ ಚಾಲಕನ ವಿರುದ್ಧ ಸಂಸ್ಥೆ ಕ್ರಮ ಕೈಗೊಳ್ಳಬೇಕು ಎಂದು ಬಸ್‌ನ ವಿವರ ಹಾಗೂ ದಂಡದ (₹1,500) ವಿವರಗಳನ್ನು ಅಲೋಕ್ ಕುಮಾರ್ ಹಂಚಿಕೊಂಡಿದ್ದಾರೆ. ಅದರ ಜೊತೆಗೆ ಕಾರಿನಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತಾ ಹೋಗುತ್ತಿರುವ ಇತರ ಕೆಲವರ ಫೋಟೊಗಳನ್ನೂ ಹಂಚಿಕೊಂಡಿದ್ದಾರೆ.

ಈ ಮೂಲಕ ಯಾವುದೇ ಸಂಚಾರ ಉಲ್ಲಂಘನೆಗಳನ್ನೂ ನಾವು ಸಹಿಸುವುದಿಲ್ಲ ಎಂದು ಅಲೋಕ್ ಕುಮಾರ್ ಅವರು ವಾಹನ ಸವಾರರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.