ಮೈಸೂರು: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಎರಡನೇ ಟೋಲ್ ಶುರುವಾದ ಬಳಿಕ ಈ ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳ ಪ್ರಯಾಣ ದರವೂ ಮಂಗಳವಾರದಿಂದ ಹೆಚ್ಚಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರು ಟೋಲ್ ಜುಲೈ 1ರಿಂದ ಕಾರ್ಯಾರಂಭ ಮಾಡಿದೆ. ಇಲ್ಲಿ ಬಸ್‌ಗಳಿಗೆ ₹525 ಟೋಲ್ ಸಂಗ್ರಹಿಸಲಾಗುತ್ತಿದೆ. ಅದನ್ನು ಸರಿದೂಗಿಸಲು ಕೆಎಸ್‌ಆರ್‌ಟಿಸಿಯು ಈ ಮಾರ್ಗದಲ್ಲಿನ ಟಿಕೆಟ್ ದರವನ್ನು ಸಾಮಾನ್ಯ ಸಾರಿಗೆ– ₹15, ರಾಜಹಂಸ– ₹20 ಹಾಗೂ ವೊಲ್ವೊ ಮತ್ತು ಎಲೆಕ್ಟ್ರಿಕ್ ಬಸ್‌ಗಳಲ್ಲಿ ₹30ರಷ್ಟು ಹೆಚ್ಚಿಸಿದೆ.
ಪ್ರಧಾನಿ ನರೇಂದ್ರ ಮೋದಿ ಇದೇ ವರ್ಷ ಮಾರ್ಚ್‌ನಲ್ಲಿ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಿದ್ದರು. ಅದರ ಬೆನ್ನಲ್ಲೇ ಬೆಂಗಳೂರಿನ ಕಣಮಿಣಕಿ ಹಾಗೂ ರಾಮನಗರ ಜಿಲ್ಲೆಯ ಶೇಷಗಿರಿಹಳ್ಳಿಯಲ್ಲಿನ ಟೋಲ್ ಪ್ಲಾಜಾಗಳಲ್ಲಿ ಟೋಲ್ ಸಂಗ್ರಹ ಶುರುವಾಗಿತ್ತು. ಆಗಲೂ ಬಸ್ ಪ್ರಯಾಣ ದರವು ₹20ರಿಂದ ₹35ರವರೆಗೆ ಹೆಚ್ಚಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.