ADVERTISEMENT

KSRTC ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ: ಆಗಸ್ಟ್‌ನಲ್ಲಿ ₹6.21 ಲಕ್ಷ ದಂಡ ವಸೂಲಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2024, 15:19 IST
Last Updated 21 ಸೆಪ್ಟೆಂಬರ್ 2024, 15:19 IST
<div class="paragraphs"><p>ಕೆಎಸ್‌ಆರ್‌ಟಿಸಿ ಬಸ್‌ಗಳು</p></div>

ಕೆಎಸ್‌ಆರ್‌ಟಿಸಿ ಬಸ್‌ಗಳು

   

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಆಗಸ್ಟ್‌ ತಿಂಗಳಲ್ಲಿ ಟಿಕೆಟ್‌ ಪಡೆಯದೇ ಪ್ರಯಾಣಿಸುತ್ತಿದ್ದ 3,851 ಪ್ರಯಾಣಿಕರಿಂದ ₹6.21 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ತನಿಖಾ ತಂಡದಲ್ಲಿನ ಅಧಿಕಾರಿಗಳು ಆಗಸ್ಟ್‌ನಲ್ಲಿ 43,781 ಬಸ್‌ಗಳಲ್ಲಿ ತಪಾಸಣೆ ನಡೆಸಿದ್ದರು. ನಿಗಮದ ಆದಾಯದಲ್ಲಿ ₹ 80,059 ಸೋರಿಕೆ ಪತ್ತೆಯಾಗಿತ್ತು. ಅದನ್ನು ದಂಡ ಸಹಿತ ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಟಿಕೆಟ್‌ ಅಥವಾ ಬಸ್‌ ಪಾಸ್‌ ಪಡೆದು ಪ್ರಯಾಣಿಸಬೇಕು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.