ADVERTISEMENT

ಸಾರಿಗೆ ನೌಕರರ ಅಹವಾಲು: ಇದೇ 26ಕ್ಕೆ ವಿಶೇಷ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 17:54 IST
Last Updated 22 ಏಪ್ರಿಲ್ 2021, 17:54 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಸಾರಿಗೆ ಸಂಸ್ಥೆಗಳ ನೌಕರರ ಅಹವಾಲುಗಳ ಕುರಿತು ಏ.26ರಂದು ವಿಶೇಷ ವಿಚಾರಣೆ ನಡೆಸಲು ಹೈಕೋರ್ಟ್ ನಿರ್ಧರಿಸಿದೆ.

ಅಲ್ಲದೇ, ನಿವೃತ್ತ ನ್ಯಾಯಾಧೀಶರ ಮಧ್ಯಸ್ಥಿಕೆಯ ಸಲಹೆಗೆ ಸ್ಪಂದಿಸುವಂತೆ ರಾಜ್ಯ ಸರ್ಕಾರಕ್ಕೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ತಿಳಿಸಿದೆ.

‘ನ್ಯಾಯಾಲಯದ ಸೂಚನೆಯಂತೆ ಮುಷ್ಕರ ಹಿಂಪಡೆಯಲಾಗಿದೆ. ನೌಕರರ ಬೇಡಿಕೆಗಳನ್ನು ಪರಿಗಣಿಸಬೇಕು. ಒಂದು ಸಾವಿರಕ್ಕೂ ಹೆಚ್ಚು ನೌಕರರನ್ನು ವಜಾಗೊಳಿಸಲಾಗಿದೆ ಮತ್ತು 10 ಸಾವಿರಕ್ಕೂ ಹೆಚ್ಚು ಜನರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ’ ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪರ ವಕೀಲರು ತಿಳಿಸಿದರು.

ADVERTISEMENT

‘ಮುಷ್ಕರ ಪರಿಸ್ಥಿತಿ ಮರುಕಳಿಸದಂತೆ ನೋಡಿಕೊಳ್ಳಲು ಸಾರಿಗೆ ನೌಕರರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಬೇಕಾಗಿದೆ.ನೌಕರರ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖೆ ಮುಂದುವರಿಸಬಹುದು. ಆದರೆ, ನೌಕರರ ಅಮಾನತು ಆದೇಶ ಮರುಪರಿಶೀಲಿಸಲು ಒಪ್ಪಬಹುದೇ’ ಎಂದು ಸರ್ಕಾರವನ್ನು ಪೀಠ ಪ್ರಶ್ನಿಸಿತು.

‘ಅಮಾನತು ಆದೇಶಗಳನ್ನು ಸಂಬಂಧಿಸಿದ ಪ್ರಾಧಿಕಾರಿಗಳ ಮುಂದೆ ಪ್ರಶ್ನಿಸಲು ಅವಕಾಶ ಇದೆ. 900 ನೌಕರರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗಿದೆ. ನೋಂದಾಯಿತ ನಾಲ್ಕು ನೌಕರರ ಸಂಘಗಳು ಮುಷ್ಕರದಿಂದ ದೂರ ಇದ್ದರೆ, ನೋಂದಾಯಿತ ನೌಕರರ ಕೂಟ ಮುಷ್ಕರಕ್ಕೆ ಕರೆ ನೀಡಿತ್ತು’ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವಡಗಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.