ನವದೆಹಲಿ: ‘ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ತೆರವು ವಿರೋಧಿಸಿ ಪ್ರತಿಭಟನೆ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು. ಅವರು ನಮ್ಮ ಪಕ್ಷದ ಶಾಲು ಹಾಕಬಹುದಿತ್ತು’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.
ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ನಾನು ಖಂಡಿತವಾಗಿಯೂ ಕೇಸರಿ ಶಾಲು ಹಾಕುವುದಿಲ್ಲ. ನಾಳೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆಗೆ ವೇದಿಕೆ ಹಂಚಿಕೊಂಡರೂ ನನ್ನ ಪಕ್ಷದ ಶಾಲು ಹಾಕಿಕೊಳ್ಳುತ್ತೇನೆ’ ಎಂದು ಸ್ಪಷ್ಟಪಡಿಸಿದರು.
‘ಸೀಟು ಹಂಚಿಕೆ ಏನೇ ಇರಲಿ, ಇಬ್ಬರೂ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಪ್ರತಿಭಟನೆ ವೇಳೆ ಯಾರೋ ಬಂದು ಕೇಸರಿ ಶಾಲು ಹಾಕಿದ್ದಾರೆ. ಆಯಾ ಸಂದರ್ಭಕ್ಕೆ ತಕ್ಕಂತೆ ಹಾಕಿದ್ದಾರೆ. ಅದಕ್ಕೆ ದೊಡ್ಡ ವ್ಯಾಖ್ಯಾನ ಮಾಡುವ ಅಗತ್ಯ ಇಲ್ಲ’ ಎಂದೂ ಹೇಳಿದರು.
‘ಬಿಜೆಪಿ ಜತೆಗೆ ಸೀಟು ಹಂಚಿಕೆ ಬಗ್ಗೆ ನಾನು ಮಾತನಾಡುವುದಿಲ್ಲ. ಕುಮಾರಸ್ವಾಮಿ ಮತ್ತು ಅಮಿತ್ ಶಾ ಚರ್ಚೆ ಮಾಡಲಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.