ಬೆಂಗಳೂರು: ಬಿ.ಎಂ.ಶ್ರೀ. ಪ್ರತಿಷ್ಠಾನವು ಕೊಡಮಾಡುವ2019ನೇ ಸಾಲಿನ ‘ಶ್ರೀ ಸಾಹಿತ್ಯ ಪ್ರಶಸ್ತಿ’ಗೆ ವಿಮರ್ಶಕ ಕೆ.ವಿ.ನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ₹1 ಲಕ್ಷ ನಗದು ಒಳಗೊಂಡಿದೆ. ಬೆಂಗಳೂರಿನ ಬಿ.ಎಂ.ಶ್ರೀ. ಕಲಾಭವನದಲ್ಲಿ ಜನವರಿ 20ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
ನಾ.ದಾಮೋದರ ಶೆಟ್ಟಿ, ಬಸವರಾಜ ಕಲ್ಗುಡಿ ಮತ್ತು ಜಿ.ಎಂ.ಹೆಗಡೆ ಅವರು ಆಯ್ಕೆ ಸಮಿತಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.