ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯ 2023ನೇ ಸಾಲಿನ ಪ್ರಶಸ್ತಿಗೆ ಹಿರಿಯ ಚಿಂತಕ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ಆಯ್ಕೆಯಾಗಿದ್ದಾರೆ.
ಅವರ ಕೃತಿ ‘ಮಹಾಭಾರತ ಅನುಸಂಧಾನದ ಭಾರತಯಾತ್ರೆ’ ಕೃತಿಗೆ ಈ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ. ನವದೆಹಲಿಯಲ್ಲಿ ಮಾರ್ಚ್ 12ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ತೋಳ್ಪಾಡಿ ಸೇರಿದಂತೆ 24 ಭಾಷೆಗಳ ಲೇಖಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಾಹಿತ್ಯ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.
‘ಭಾರತ ಯಾತ್ರೆ’ ಪುಸ್ತಕವು ‘ಪ್ರಜಾವಾಣಿ’ಯ ಸಾಹಿತ್ಯ ಪುರವಣಿ ‘ಮುಕ್ತಛಂದ’ದಲ್ಲಿ ಪ್ರಕಟವಾಗುತ್ತಿದ್ದ ‘ಮಹಾಭಾರತ ಅನುಸಂಧಾನ’ದ ಅಂಕಣ ಬರಹಗಳ ಸಂಗ್ರಹ.
ಕನ್ನಡ ವಿಭಾಗದ ಆಯ್ಕೆ ಸಮಿತಿಯಲ್ಲಿ ನಾಗೇಶ ಹೆಗಡೆ, ಆನಂದ ಝಂಜರವಾಡ ಹಾಗೂ ಜೆ.ಎನ್.ತೇಜಶ್ರೀ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.