ಬೆಂಗಳೂರು: ತೋಟಗಾರಿಕೆ ಇಲಾಖೆ ವತಿಯಿಂದ ಲಾಲ್‌ಬಾಗ್ ಉದ್ಯಾನದಲ್ಲಿ ಆಗಸ್ಟ್ 4ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದ್ದು, ಉದ್ಯಾನ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗದಂತೆ ತಡೆಯಲು ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.
‘ಗಣ್ಯರು, ಪ್ರವಾಸಿಗರು, ವಿದೇಶಿಗರು, ಶಾಲಾ ಮಕ್ಕಳು ಸೇರಿದಂತೆ ಸುಮಾರು 10 ಲಕ್ಷ ಜನ ಪ್ರದರ್ಶನ ವೀಕ್ಷಿಸಲು ಬರುವ ನಿರೀಕ್ಷೆ ಇದೆ. ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ. ಕೆಲವು ಕಡೆ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ನಿಲುಗಡೆ ನಿರ್ಬಂಧಿತ ರಸ್ತೆಗಳು:
* ಲಾಲ್‌ಬಾಗ್ ಮುಖ್ಯ ದ್ವಾರದಿಂದ ನಿಮ್ಹಾನ್ಸ್‌ವರೆಗಿನ ಡಾ. ಮರಿಗೌಡ ರಸ್ತೆ
* ಕೆ.ಎಚ್. ವೃತ್ತದಿಂದ ಶಾಂತಿನಗರ ಜಂಕ್ಷನ್
* ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್ ಮುಖ್ಯದ್ವಾರದವರೆಗೆ
* ಊರ್ವಶಿ ಚಿತ್ರಮಂದಿರದಿಂದ ವಿಲ್ಸನ್ ಗಾರ್ಡನ್ 12ನೇ ಅಡ್ಡರಸ್ತೆವರೆಗೆ
* ಕೃಂಬಿಗಲ್ ರಸ್ತೆ
* ಲಾಲ್‌ಬಾಗ್ ಪಶ್ಚಿಮ ದ್ವಾರದಿಂದ ಆರ್.ವಿ. ಟೀಚರ್ಸ್ ಕಾಲೇಜ್‌ವರೆಗೆ
* ಆರ್.ವಿ. ಟೀಚರ್ಸ್ ಕಾಲೇಜ್‌ನಿಂದ ಅಶೋಕ ಪಿಲ್ಲರ್‌ವರೆಗೆ
* ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್‌ವರೆಗೆ
ನಿಲುಗಡೆಗೆ ಅವಕಾಶ ಕಲ್ಪಿಸಿರುವ ರಸ್ತೆಗಳು:
* ಡಾ. ಮರಿಗೌಡ ರಸ್ತೆಯ ಆಲ್ ಅಮೀನ್ ಕಾಲೇಜು ಹಾಗೂ ಹಾಪ್‌ಕಾಮ್ಸ್ ಆವರಣ
* ಶಾಂತಿನಗರ ಬಸ್ ನಿಲ್ದಾಣದ ಬಹುಮಹಡಿ ಕಟ್ಟಡ
* ಜೆ.ಸಿ. ರಸ್ತೆಯ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.