ಬೆಂಗಳೂರು: ಭೂಸುಧಾರಣೆ ಕಾಯ್ದೆ ತಿದ್ದುಪಡಿ ವಿಷಯ ಗುರುವಾರ ಮತ್ತೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಸೆಕ್ಷನ್ 80 ಕೈಬಿಡುವ ಬಗ್ಗೆ ಕೆಲವು ಸಚಿವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬಹುಪಾಲು ಸಚಿವರ ಆಕ್ಷೇಪಕ್ಕೆ ಮಣಿದು, ಸೆಕ್ಷನ್ 80 ಅನ್ನು (ಕೃಷಿಕರಲ್ಲದವರಿಗೆ ಭೂಮಿ ವರ್ಗಾವಣೆ ಮಾಡು ವುದಕ್ಕೆ ನಿಷೇಧ) ಉಳಿಸಿಕೊಳ್ಳಲು ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ನೀರಾವರಿ ಜಮೀನನ್ನು ತಿದ್ದುಪಡಿ ವ್ಯಾಪ್ತಿಯಿಂದ ಹೊರಗಿಡುವ ಇಂಗಿತ ವ್ಯಕ್ತಪಡಿಸಿದರು. ಅದಕ್ಕೂ ಬಹುತೇಕ ಸಚಿವರು ಬೆಂಬಲ ವ್ಯಕ್ತಪಡಿಸಿದರು ಎಂದು ಮೂಲಗಳು ಹೇಳಿವೆ.
ಸುದ್ದಿಗಾರರ ಜತೆ ಮಾತನಾಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಸೆಕ್ಷನ್ 80 ಅನ್ನು ತೆಗೆದರೆ, ಕೃಷಿ ಜಮೀನು ಅಡಮಾನ ಇಡುವುದಕ್ಕೆ ಅವಕಾಶ ನೀಡಬಾರದು ಎಂಬ ಅಭಿಪ್ರಾಯ ವ್ಯಕ್ತವಾಯಿತು ಎಂದರು.
ಸೆಕ್ಷನ್ 80 ಮತ್ತು ನೀರಾವರಿ ಜಮೀನನ್ನು ತಿದ್ದುಪಡಿ ವ್ಯಾಪ್ತಿಯಿಂದ ಹೊರಗಿಡುವ ವಿಚಾರ ಬಗ್ಗೆ ಪರಿಶೀಲನೆ ನಡೆಸಿ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.