ADVERTISEMENT

ಅಂಕೋಲದಲ್ಲಿ ಭೂಕುಸಿತ | ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ: ಕೃಷ್ಣಬೈರೇಗೌಡ

​ಪ್ರಜಾವಾಣಿ ವಾರ್ತೆ
Published 16 ಜುಲೈ 2024, 15:52 IST
Last Updated 16 ಜುಲೈ 2024, 15:52 IST
ಕೃಷ್ಣಬೈರೇಗೌಡ
ಕೃಷ್ಣಬೈರೇಗೌಡ   

ಬೆಂಗಳೂರು: ಅಂಕೋಲ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ವಿಧಾನಸಭೆಯಲ್ಲಿ ಈ ಕುರಿತು ಹೇಳಿಕೆ ನೀಡಿದ ಅವರು, ‘ಭೂಕುಸಿತದಿಂದ ಡಾಬಾದ ನಾಲ್ಕು ಮಂದಿ ಮತ್ತು ಅನಿಲ ಟ್ಯಾಂಕರ್‌ಗಳ  ಮೂರು ಮಂದಿ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದಾರೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT