ಬೆಂಗಳೂರು: ಕೇರಳದ ವಯನಾಡಿನಲ್ಲಿ ಭಾರಿ ಮಳೆಯಿಂದಾಗಿ ಸಂಭವಿಸಿದ ಗುಡ್ಡ ಕುಸಿತದಿಂದ ಅಪಾರ ಪ್ರಾಣಹಾನಿ, ಆಸ್ತಿ ಹಾನಿ ಉಂಟಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ’ ಎಂದು ಬರೆದುಕೊಂಡಿದ್ದಾರೆ.
ಮುಂದುವರಿದ ರಕ್ಷಣಾ ಕಾರ್ಯಾಚರಣೆ
ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ 58ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಸರ್ಕಾರದ ಮೂಲಗಳು ತಿಳಿಸಿವೆ.
ನದಿ ಮತ್ತು ಮಣ್ಣಿನಡಿಯಿಂದ ಮೃತದೇಹಗಳನ್ನು ಹೊರ ತೆಗೆಯಲು ರಕ್ಷಣಾ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.