ADVERTISEMENT

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿಲ್ಲ: ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 20 ಮೇ 2024, 9:52 IST
Last Updated 20 ಮೇ 2024, 9:52 IST
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ   

ಬೆಂಗಳೂರು: ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿಲ್ಲ. ಹುಬ್ಬಳ್ಳಿ, ಧಾರವಾಡ ನಗರಗಳಲ್ಲಿ ನಡೆದಿರುವ ಯುವತಿಯರ ಕೊಲೆ ಪ್ರಕರಣಗಳ ಆಧಾರದಲ್ಲಿ ಅಂತಹ ಅಭಿಪ್ರಾಯಕ್ಕೆ ಬರುವುದು ಸರಿಯಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು ಪ್ರೆಸ್‌ ಕ್ಲಬ್‌ ಸೋಮವಾರ ಆಯೋಜಿಸಿದ್ದ ಪತ್ರಿಕಾ ಸಂವಾದದಲ್ಲಿ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘2021ರಲ್ಲಿ ಇದೇ ಅವಧಿಯಲ್ಲಿ ರಾಜ್ಯದಲ್ಲಿ 449 ಕೊಲೆಗಳಾಗಿದ್ದವು. 2022ರಲ್ಲಿ 466, 2023ರಲ್ಲಿ 446 ಕೊಲೆಗಳಾಗಿದ್ದರೆ, 2024ರಲ್ಲಿ 430 ಕೊಲೆಗಳಾಗಿವೆ. ಅಂಕಿಅಂಶಗಳ ಪ್ರಕಾರ, ಈ ವರ್ಷ ಕೊಲೆ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ’ ಎಂದರು.

'ನಾಗರಿಕ ಸಮಾಜದಲ್ಲಿ ಕೊಲೆ, ಅತ್ಯಾಚಾರ ಪ್ರಕರಣಗಳು ನಡೆಯುವುದನ್ನು ಒಪ್ಪಲು ಸಾಧ್ಯವಿಲ್ಲ. ಹುಬ್ಬಳ್ಳಿಯ ನೇಹಾ ಪಾಟೀಲ ಮತ್ತು ಧಾರವಾಡದ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆಯೂ ಪ್ರಗತಿಯಲ್ಲಿ. ಕೊಲೆಗಡುಕರಿಗೆ ಅತ್ಯಂತ ಕಠಿಣ ಶಿಕ್ಷೆ ಕೊಡಿಸಲು ಸರ್ಕಾರ ಪ್ರಯತ್ನಿಸಲಿದೆ’ ಎಂದು ಭರವಸೆ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.