ಬೆಂಗಳೂರು: ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಉಪ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಕೂಲವಾಗಲು ಕಾರ್ಮಿಕರಿಗೆ ವೇತನ ಸಹಿತ ರಜೆಯನ್ನು ಭಾರತ ಚುನಾವಣಾ ಆಯೋಗವು ಘೋಷಣೆ ಮಾಡಿದೆ.
ರಾಜ್ಯದಲ್ಲಿ ಎರಡ ಹಂತದಲ್ಲಿ ಅಂದರೆ ಏ.26 ಮತ್ತು ಮೇ 7ರಂದು ಲೋಕಸಭಾ ಚುನಾವಣೆ ನಡೆಯಲಿದೆ. ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭೆಗೆ ಮೇ 7ರಂದು ಉಪಚುನಾವಣೆ ನಿಗದಿಯಾಗಿದೆ.
ಆಯಾ ಕ್ಷೇತ್ರಗಳ ಮತದಾರರು ಅಂದು ಮತ ಚಲಾಯಿಸಲು ಅನುಕೂಲ ಮಾಡಿಕೊಡಲು ಅಂಗಡಿ, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು, ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನಸಹಿತ ರಜೆ ನೀಡಬೇಕು ಎಂದು ಆದೇಶ ನೀಡಿದೆ. ತಪ್ಪಿದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳುವುದಾಗಿ ಆಯೋಗ ಎಚ್ಚರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.