ADVERTISEMENT

ವಿರೋಧ ಪಕ್ಷದಿಂದ ಅಡ್ಡಿ: ಪರಿಷತ್ ಕಲಾಪ 3 ಗಂಟೆವರೆಗೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2019, 8:30 IST
Last Updated 7 ಫೆಬ್ರುವರಿ 2019, 8:30 IST
   

ಬೆಂಗಳೂರು: ವಿಧಾನ ಪರಿಷತ್‌ನಲ್ಲಿಮಧ್ಯಾಹ್ನ 12.15ಕ್ಕೆ ಕಲಾಪ ಮತ್ತೆ ಆರಂಭವಾದಾಗಲೂ ಬಿಜೆಪಿ ಸದಸ್ಯರು ಧರಣಿ ಮುಂದುವರಿಸಿದರು. ‍'ಯಾವ ಕಾರಣಕ್ಕೆ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದೀರಿ ಎಂಬುದನ್ನಾದರೂ ಹೇಳಿ' ಎಂದು ವಿರೋಧ ಪಕ್ಷದ ನಾಯಕರನ್ನು ಸಭಾಪತಿ ಪ್ರಶ್ನಿಸಿದರು.

‘ಸರ್ಕಾರಕ್ಕೆ ಬಹುಮತವೇ ಇಲ್ಲ. ಕಲಾಪ ನಡೆಸುವುದರಲ್ಲಿ ಅರ್ಥವೇ ಇಲ್ಲ’ಎಂದು ಕೋಟ ಶ್ರೀನಿವಾಸ ಪೂಜಾರಿ ಉತ್ತರಿಸಿದರು. ‘ಹಾಗಿದ್ದರೆ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡಿಸಬಹುದಲ್ಲವೇ. ಅದನ್ನು ಬಿಟ್ಟು ಕಲಾಪಕ್ಕೆ ಅಡ್ಡಿಪಡಿಸುವುದು ಸರಿಯೇ’ಎಂದು ಸಭಾಪತಿ ಪ್ರಶ್ನಿಸಿದರು.

‘ಮುಖ್ಯಮಂತ್ರಿ ರಾಜಿನಾಮೆ ಕೊಡುವುದು ಒಂದೇ ದಾರಿ’ಎಂದು ಕೋಟ ಪ್ರತಿಕ್ರಿಯಿಸಿದರು. ಬಿಜೆಪಿ ಸದಸ್ಯರು ಸಭಾಧ್ಯಕ್ಷರ ಪೀಠದೆದುರು ಗದ್ದಲ ನಡೆಸುತ್ತಿದ್ದ ನಡುವೆಯೇ ವಿವಿಧ ಕಾಗದ ಪತ್ರಗಳನ್ನು ಮಂಡಿಸಲಾಯಿತು. ಬಳಿಕ ಸಭಾಪತಿಯವರು ಕಲಾಪವನ್ನು ಮಧ್ಯಾಹ್ನ 3ಕ್ಕೆ ಮುಂದೂಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.