ADVERTISEMENT

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ 2ನೇ ಹಂತದ ಟೋಲ್‌; ಶುಲ್ಕದ ವಿವರ ಇಲ್ಲಿದೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2023, 10:25 IST
Last Updated 28 ಜೂನ್ 2023, 10:25 IST
ಗಣಂಗೂರು ಟೋಲ್‌
ಗಣಂಗೂರು ಟೋಲ್‌    

ಮಂಡ್ಯ: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ 2ನೇ ಹಂತದ ಟೋಲ್‌ ಸಂಗ್ರಹಕ್ಕೆ ಮಹೂರ್ತ ನಿಗದಿಯಾಗಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರು ಟೋಲ್‌ ಕೇಂದ್ರ ಜುಲೈ 1ರಿಂದ ಆರಂಭವಾಗಲಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನಿಂದ ಮದ್ದೂರು ತಾಲ್ಲೂಕು ನಿಡಘಟ್ಟವರೆಗೆ ಈಗಾಗಲೇ ಮೊದಲ ಹಂತದ ಟೋಲ್‌ ಸಂಗ್ರಹ ಮಾಡಲಾಗುತ್ತಿದೆ. ನಿಡಘಟ್ಟದಿಂದ ಮೈಸೂರಿನವರೆಗೆ ಕಾಮಗಾರಿ ಅಪೂರ್ಣವಾಗಿದ್ದರಿಂದ ಟೋಲ್‌ ಸಂಗ್ರಹ ಮಾಡುತ್ತಿರಲಿಲ್ಲ. ನಿಡಘಟ್ಟದಿಂದ ಮೈಸೂರು ಪ್ರವೇಶಿಸುವ ಮಣಿಪಾಲ್‌ ಆಸ್ಪತ್ರೆ ವೃತ್ತದವರೆಗೆ 60 ಕಿ.ಮೀ ಅಂತರವಿದ್ದು ಗಣಂಗೂರು ಟೋಲ್‌ನಲ್ಲಿ ಶುಲ್ಕ ಸಂಗ್ರಹ ಮಾಡಲಾಗುತ್ತದೆ.

ಬೆಂಗಳೂರಿನಿಂದ ಮೈಸೂರು ಕಡೆಗೆ ಪ್ರಯಾಣಿಸುವವರು ಬೆಂಗಳೂರು ನಗರ ಜಿಲ್ಲೆಯ ಕಣಮಿಣಕಿ ಗ್ರಾಮದ ಬಳಿಯ ಟೋಲ್‌ನಲ್ಲಿ ಶುಲ್ಕ ಕಟ್ಟಿ ಪ್ರಯಾಣಿಸಬೇಕು. ಅದು ನಿಡಘಟ್ಟದವರೆಗೂ ಅನ್ವಯವಾಗುತ್ತದೆ. ನಿಡಘಟ್ಟದಿಂದ ಹೊಸ ಟೋಲ್‌ ಆರಂಭಗೊಳ್ಳಲಿದ್ದು ಗಣಂಗೂರು ಟೋಲ್‌ನಲ್ಲಿ ಶುಲ್ಕ ಪಾವತಿಸಿ ಮುಂದೆ ಪ್ರಯಾಣ ಮಾಡಬೇಕು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.